ಅ.31: ಲಾಯಿಲ ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ

ಲಾಯಿಲ ನೂರುಲ್  ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ , ನೂರುಲ್ ಹುದಾ ಜುಮ್ಮಾ ಮಸೀದಿ, ಲಾಯಿಲ ಗ್ರಾ.ಪಂ ಮತ್ತು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ  ಅ.31 ರಂದು ನಡೆಯಲಿದೆ.

ಲಾಯಿಲ ನೂರುಲ್  ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ವಠಾರದಲ್ಲಿ ನಡೆಯಲಿರುವ ವೈದ್ಯಕೀಯ ಶಿಬಿರದಲ್ಲಿ  ಕಣ್ಣಿನ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ಎಲುಬು ಮತ್ತು ಕೀಲು ರೋಗ ವಿಭಾಗ, ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಚರ್ಮರೋಗ, ಸ್ತ್ರೀರೋಗ, ಮಕ್ಕಳ ವಿಭಾಗದ ತಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶಿಬಿರಾರ್ಥಿಗಳಿಗೆ ಬೇಕಾದ ಔಷಧಿಗಳನ್ನು ಸ್ಥಳದಲ್ಲಿಯೇ ಉಚಿತವಾಗಿ ನೀಡಲಾಗುವುದು.  ಜೊತೆಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಕೆ.ಎಂ.ಸಿ ಆಸ್ಪತ್ರೆಯ ಹಸಿರು ಕಾರ್ಡು ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಟ್ರಸ್ಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.