ಪೆರೋಡಿತ್ತಾಯಕಟ್ಟೆ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ವಾರ್ಷಿಕ ಸಭೆ

ತೆಂಕಕಾರಂದೂರು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯಕಟ್ಟೆ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಇದರ ಜಂಟಿ ಆಶ್ರಯದಲ್ಲಿ ವಾರ್ಷಿಕ ಮಹಾಸಭೆಯು ಅ.24 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಘುನಾಥ ತೆಲುಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಶಾಲೆಯ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ಮತ್ತು ತೆಂಕಕಾರಂದೂರು ಗ್ರಾಮದಿಂದ ಬಳಂಜ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಜನಪ್ರತಿನಿಧಿಗಳಾದ ನಿಜಾಮ್, ಲೀಲಾವತಿ, ಪದ್ಮಾವತಿ, ಪ್ರಸನ್ನ ಕುಮಾರಿ ಹಾಗೂ ಕೋವಿಡ್ ಸಂದರ್ಭದಲ್ಲಿ ಗ್ರಾಮಕ್ಕೆ ಸೇವೆ ನೀಡಿದ ಆಶಾ ಕಾರ್ಯಕರ್ತೆಯಾರಾದ, ರೇವತಿ, ಗುಲಾಬಿ, ಇವರುಗಳನ್ನು ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ, ಶಾಲಾ ಶಿಕ್ಷಕ-ಶಿಕ್ಷಿಯರ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ನಾರಾಯಣ ಮೂಲ್ಯ ಕಳಿಕ ಇವರು ಅನಿಸಿಕೆ ವ್ಯಕ್ತಪಡಿಸಿದರು. ಗ್ರಾ.ಪಂ. ಸದಸ್ಯರು, ಆಶಾ ಕಾರ್ಯಕರ್ತೆಯರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕ ವೃಂದದವರು, ಬಿಸಿಯೂಟ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಯಿನಿ ಪದ್ಮಾವತಿ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ ಪ್ರಾಸ್ತಾವಿಕ ಭಾಷಣ ಮಾಡಿದರು. ಸಮಿತಿ ಅಧ್ಯಕ್ಷ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.