ಬಂದಾರು ಗ್ರಾ.ಪಂ.ನಲ್ಲಿ ‘ಕಾನೂನು ಸೇವಾ ಸಪ್ತಾಹ’

ಬಂದಾರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.ಮಂಗಳೂರು, ಬೆಳ್ತಂಗಡಿ  ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಬಂದಾರು ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಸ್ವತಂತ್ರ ಭಾರತದ ಅಮೃತ ಮಹೋತ್ಸವದ ಅಂಗವಾಗಿ ಭಾರತ ರಾಷ್ಟ್ರಾದ್ಯಂತ ಜಾಗೃತಿ ಮತ್ತು ಪ್ರಚಾರ ಕಾರ್ಯಕ್ರಮ ‘ಕಾನೂನು ಸೇವಾ ಸಪ್ತಾಹ’ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಕೆ.ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಧನಂಜಯ ರವರು ಕಾನೂನು ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ  ಪಂಚಾಯತ್ ಅಭಿವೃದ್ಧಿ‌ ಅಧಿಕಾರಿ ಮೋಹನ್ ಬಂಗೇರ, ಗ್ರಾ.ಪಂ. ಉಪಾಧ್ಯಕ್ಷ  ಗಂಗಾಧರ ,  ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ದಿನೇಶ್ ‌ಗೌಡ ಖಂಡಿಗ, ಚೇತನ್ ಗೌಡ,  ಪುಷ್ಪಾ,  ಭಾರತಿ, ವಿಮಲ, ಗ್ರಾ.ಪಂ ಸಿಬ್ಬಂದಿವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದು, ಮಾಹಿತಿ ಪಡೆದುಕೊಂಡರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.