ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಇಂದು (ನ.1 ರಂದು) ಬೆಳ್ತಂಗಡಿ ಮಿನಿ ವಿಧಾನಸೌಧದ ಆವರಣದಲ್ಲಿ ಆಚರಿಸಲಾಯಿತು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು, ತಹಶೀಲ್ದಾರ್ ಮಹೇಶ್ ಜೆ. ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ ಕರ್ನಾಟಕದ ಗಡಿಭಾಗವಾದ ಕಾಸರಗೋಡಿನಲ್ಲಿರುವ ಕನ್ನಡಿಗರಿಗೂ ರಾಜ್ಯೋತ್ಸವದ ಶುಭಾಶಯವನ್ನು ಕೋರಿ ಈ ಭಾಗವು ಕರ್ನಾಟಕಕ್ಕೆ ಸೇರುವಂತಾಗಬೇಕು. ದೇಶ ವಿದೇಶಗಳಲ್ಲಿ ಕನ್ನಡ ಮಾತನಾಡುವವರು ರಾಜ್ಯೋತ್ಸವ ಆಚರಿಸುತ್ತಿದ್ದು ಏಕೀಕರಣಗೊಳಿಸುವಲ್ಲಿ ಒಗ್ಗೂಡಿಸುವ ಕೆಲಸ ಮಾಡಬೇಕು. ಈ ಬಾರಿಯ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದ ತಾಲೂಕಿನ ನಾಲ್ಕು ಮಂದಿಗೆ ಹಾಗೂ ಒಂದು ಸಂಸ್ಥೆಗೆ ತಾಲೂಕಿನ ಪರವಾಗಿ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಹಿಂಹ ನಾಯಕ್ ಮಾತನಾಡಿ ಆಂಗ್ಲ ಮಾಧ್ಯಮದ ವ್ಯಾಮೋಹದಲ್ಲಿ ಕನ್ನಡ ಭಾಷೆಗೆ ಸಿಗಬೇಕಾದ ಗೌರವ ಕೊರತೆಯಾಗುತ್ತಿದ್ದೆ. ಈ ಸಂದರ್ಭದಲ್ಲಿ ಕನ್ನಡಿಗರಾದ ನಾವು ನಮ್ಮ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಕನ್ನಡದ ಮೇರು ನಟ ಪುನೀತ್ ರಾಜ್ ಕುಮಾರ್ ಕನ್ನಡದ ಸಂಸ್ಕೃತಿಯಲ್ಲಿ ಮಾಡಿದ ಸೇವೆ ಅಪಾರ ಅವರ ಅಕಾಲಿಕ ನಿಧನ ರಾಜ್ಯದ ಜನತೆಗೆ ದುಃಖ ಉಟು ಮಾಡಿದೆ ಎಂದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ನಿವೃತ್ತಿ ಸೇನಾನಿ ಎಂ. ಆರ್. ಜೈನ್, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿ ಕರುಣಾಕರ್, ಪೊಲೀಸ್ ವೃತ್ತ ನಿರೀಕ್ಷಕ ಅಶೋಕ್ ಕುಮಾರ್ ಮತ್ತು ಇಲಾಖಾಧಿಕಾರಿಗಳು ಭಾಗವಹಿಸಿದರು.

ತಾ.ಪಂ. ಕಾರ್ಯನಿರ್ವಹಣಾ ಅಧಿಕಾರಿ ಕುಸುಮಾಧರ್ ಸ್ವಾಗತಿಸಿ, ಕ್ಷೇತರ ಶಿಕ್ಷಣ ಅಧಿಕಾರಿ ಹೆಚ್.ಎಸ್. ವಿರೂಪಾಕ್ಷಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮಕ್ಕಳಿಂದ ವೈವೀಧ್ಯಮಯ ನೃತ್ಯ ಪದರ್ಶನ ನಡೆಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.