ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರವರ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರನ್ನು ,ಧರ್ಮಸ್ಥಳದ ಸನ್ನಿಧಿ ಅತಿಥಿ ಗೃಹದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್ ಎಚ್.ಕೆ.,ಕಾರ್ಯದರ್ಶಿ ಸುರೇಶ್ ಮಾಚಾರ್ ,ಜಿಲ್ಲಾ ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಿದರು.
ಮನವಿಯಲ್ಲಿ ಮುಖ್ಯವಾಗಿ ಶಿಕ್ಷಕರ ವರ್ಗಾವಣೆ,ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ಬದಲಾವಣೆ,ಮುಖ್ಯ ಗುರುಗಳ10,15,20 ಮತ್ತು ವರ್ಷಗಳ ಬಾಕಿ ಇರುವ ಇಂಕ್ರಿಮೆಂಟ್ ಮಂಜೂರಾತಿ ಬಗ್ಗೆ,ಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ,ಹೊಸ ಪಿಂಚಣಿ ಯೋಜನೆ ರದ್ದತಿ, ಶಾಲೆಗಳಿಗೆ ಶೌಚಾಲಯ ಸೇರಿದಂತೆ ಇತರ ಭೌತಿಕ ಸೌಲಭ್ಯಗಳನ್ನು ಒದಗಿಸುವ ಬಗ್ಗೆ, ಶಾಲಾನುದಾನ ಒದಗಿಸುವ ಬಗ್ಗೆ,ಅಕ್ಷರ ದಾಸೋಹದ ಸಾದಿಲ್ವಾರು ವೆಚ್ಚ ಮತ್ತು ಗ್ಯಾಸ್ ಅನುದಾನ ಹೆಚ್ಚಳ ಮಾಡುವುದು ಸೇರಿದಂತೆ ಹಲವು ವಿಷಯಗಳು ಒಳಗೊಂಡಿವೆ.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.