ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಅಪರಿಚಿತ ವ್ಯಕ್ತಿ ಮೃತ್ಯು: ವಾರಿಸುದಾರರಿಗಾಗಿ ಪೊಲೀಸರ ಹುಡುಕಾಟ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಅಪರಿಚಿತ ಯಾತ್ರಾರ್ಥಿಯೊಬ್ಬರು ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಬಳಿ ನ.16 ರಂದು ಅಸೌಖ್ಯದಿಂದ ಬಳಲುತ್ತಿರುವುದನ್ನು ಕಂಡ ಸ್ಥಳೀಯರು ಆತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆ ವ್ಯಕ್ತಿಯು ನ.18 ರಂದು ಮೃತಪಟ್ಟ ಘಟನೆ ನಡೆದಿದೆ.

ಅಂದಾಜು 35 ರಿಂದ 40 ವರ್ಷ ಪ್ರಾಯದ  ಈ ಅಪರಿಚಿತ ವ್ಯಕ್ತಿಯ ಮೃತ ಶರೀರವು ಮಂಗಳೂರು ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ಶವಾಗಾರದಲ್ಲಿದ್ದು, ಈ  ವ್ಯಕ್ತಿಯ ವಾರೀಸುದಾರರು, ಸಂಬಂಧಿಕರು ಯಾರಾದರೂ ಇದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.