ಮಾದರಿ ನೀತಿ ಸಂಹಿತೆ ಜಾರಿ: ದ.ಕ ಜಿಲ್ಲೆಯಾದ್ಯಂತ ಸಹಕಾರ ಸಂಘಗಳ ವಾರ್ಷಿಕ ಸಭೆ ಮುಂದೂಡಿಕೆ

ಬೆಳ್ತಂಗಡಿ: ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳ ವಾರ್ಷಿಕ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

ಮುಂದೂಡಿಕೆಯಾದ ಸಹಕಾರಿ ಸಂಘಗಳ ವಾರ್ಷಿಕ ಮಹಾಸಭೆಯನ್ನು ಡಿ.16 ರ ನಂತರ ನಡೆಸುವಂತೆ ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ದ.ಕ ಜಿಲ್ಲೆಯಲ್ಲಿರುವ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಪತ್ತಿನ ಸಹಕಾರ ಸಂಘಗಳು ಹಾಗೂ ಇತರೆ ಎಲ್ಲಾ ವಿವಿಧ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿ\ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದಾರೆ.

 

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.