ನ.28: ಉಜಿರೆಯಲ್ಲಿ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ

ಉಜಿರೆ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್ ಕಾರ್ಗೋ ಲಾಜಿಸ್ಟಿಕ್ ನ ಅವಶ್ಯ ಫೌಂಡೇಷನ್ ಇದರ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರದ ಪುನರಾರಂಭ ಕಾರ್ಯಕ್ರಮ ನ.28 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಶ್ರೀ ಶಾರದಾ ಮಂಟಪದಲ್ಲಿ ಜರುಗಲಿದೆ.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್, ಮುಂಡಾಜೆ ರೋಟರಿ ಕ್ಲಬ್ ಅಧ್ಯಕ್ಷ ಸೆಬಾಸ್ಟಿನ್ ಪೊಕ್ಕಂದಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಉಚಿತವಾಗಿ ಮಾನಸಿಕ ಆರೋಗ್ಯ ತಪಾಸಣೆ ಹಾಗೂ ಔಷಧಿಗಳನ್ನು ವಿತರಿಸಲಾಗುತ್ತಿದ್ದು, ಶಿಬಿರಾರ್ಥಿಗಳು ಈ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.