ಬೆಳ್ತಂಗಡಿ: ಬಳಂಜ ಬಿಲ್ಲವ ಸಂಘಕ್ಕೆ ಬೆಸ್ಟ್ ಫೌಂಡೆಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ರವರಿಂದ 350 ಚಯರ್ ಭರವಸೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಬೆಸ್ಟ್ ಫೌಂಡೇಶನ್ ವತಿಯಿಂದ ಸುಮಾರು 350 ಚಯರ್ ನೀಡುವುದಾಗಿ ಅಧ್ಯಕ್ಷ ರಕ್ಷಿತ್ ಶಿವರಾಮ್ ಭರವಸೆ ನೀಡಿದರು.
ಕಳೆದ 42 ವರ್ಷಗಳ ಇತಿಹಾಸವಿರುವ ಬಳಂಜ ಬಿಲ್ಲವ ಸಂಘ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಮಾಜ ಸಂಘಟನೆಯನ್ನು ಮಾಡುತ್ತಿದ್ದು ಹಲವಾರು ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದ ಅಭಿವೃದ್ಧಿಗೆ ವಿಶೇಷ ಕೊಡಿಗೆ ನೀಡುತ್ತ ಶ್ರಮಿಸುತ್ತಿದೆ.ಸುಮಾರು ಒಂದು ಕೋಟಿ ವೆಚ್ಚದಲ್ಲಿ ಭವ್ಯವಾದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ನಿರ್ಮಿಸಿ ಸಮಾಜದಲ್ಲಿ ಮಾದರಿ ಸಂಘವೆನಿಸಿಕೊಂಡಿದೆ.

ಸಂಘದ ಕೆಲವೊಂದು ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಅವರಿಗೆ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಅವರು ನ. 24 ರಂದು ಮನವಿ ನೀಡಿದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಮ್ ಅವರು ಜನವರಿ ತಿಂಗಳೊಳಗೆ ಸುಮಾರು 350 ಚಯರ್ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಹಿರಿಯ ಸದಸ್ಯರಾದ ಬಾಬು ಪೂಜಾರಿ ಆಲಡ್ಕ, ಪ್ರ.ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಜೊತೆ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ನಿರ್ದೇಶಕರಾದ ರವೀಂದ್ರ ಬಿ ಅಮೀನ್, ಜಗದೀಶ್ ತಾರಿಪಡ್ಪು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.