ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಯೂಟ ಕೇಂದ್ರ ಉದ್ಘಾಟನೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಯೂಟ ಯೋಜನೆಗೆ ನ.25 ರಂದು ಚಾಲನೆ ದೊರಕಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎನ್ ಜೋಸೆಫ್ , ನಿಕಟ ಪೂರ್ವ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ವಿದ್ಯಾರ್ಥಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯೋಜನೆಯ ಧ್ಯೇಯೋದ್ದೇಶಗಳನ್ನು ಕುರಿತು ಪ್ರೊ. ಅಲೆಕ್ಸ್ ಐವನ್ ಸೀಕ್ವೆರಾ ಮಾತನಾಡಿದರು. ಸರಕಾರದ ಯಾವುದೇ ಆರ್ಥಿಕ ಸಹಾಯವಿಲ್ಲದೆ ನಡೆಸುತ್ತಿರುವ ಈ ಯೋಜನೆಯ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಸಂಯೋಜಕರದ ಪ್ರೋ ಬೇಬಿ ಎ, ಪ್ರೊ ಉಷಾ, ಪ್ರಾಧ್ಯಾಪಕರಾದ ಜನಾರ್ಧನ ರಾವ್ , ರಾಜೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.