ಗೋಳಿಯಂಗಡಿಯಲ್ಲಿ ಓಮ್ನಿ ಆಕ್ಟಿವಾ ಡಿಕ್ಕಿ ಬೈಕ್ ಸವಾರ ಆಸ್ಪತ್ರೆಗೆ ದಾಖಲು

ವೇಣೂರು : ಗೋಳಿಯಂಗಡಿಯಲ್ಲಿ ದ್ವಿಚಕ್ರ ವಾಹನ ಮತ್ತು ಒಮ್ನಿ ಕಾರು ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ನ.26 ರಂದು ನಡೆದಿದೆ. ಘಟನೆಯಿಂದ ಆಕ್ಟಿವಾ ಸವಾರ ಗೋಳಿಯಂಗಡಿ ನಿವಾಸಿ ಆನಂದರವರ ಪುತ್ರ ಅಂಕಿತ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕಿತ್ ರವರು ತಮ್ಮ ಆಕ್ಟಿವಾ ವಾಹನದಲ್ಲಿ ಮೂಡಬಿದ್ರಿಯಿಂದ ಕುಕ್ಕೇಡಿ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿ ಕಡೆಯಿಂದ ವೇಣೂರು ಕಡೆ  ಸಂಚರಿಸುತ್ತಿದ್ದ ಒಮ್ನಿ ಕಾರು ಗೋಳಿಯಂಗಡಿ ಸಮೀಪ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಹಾಗೂ ಒಮ್ನಿ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅಂಕಿತ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರ ಸಹಕಾರದಿಂದ  ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ವೇಣೂರು ಠಾಣಾ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.