ಬೆಳ್ತಂಗಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಆಲ್ದೂರಿನಲ್ಲಿ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವರು ಕಾಲೇಜಿಗೆಂದು ಹೊರಟುಹೋದವರು,  ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾಣೆಯಾದ ವಿದ್ಯಾರ್ಥಿನಿಯನ್ನು ಚಿಕ್ಕಮಗಳೂರಿನ ಆಲ್ದೂರು ಗ್ರಾಮದಲ್ಲಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿಯ ಪಿಯು ಕಾಲೇಜೊಂದರಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯು ನ.17 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಸೇರ್ಪಡೆಗೊಂಡಿದ್ದರು. ನ.24 ರಂದು ಬೆಳಿಗ್ಗೆ ಎಂದಿನಂತೆ ಹಾಸ್ಟೆಲ್ ನ ಇತರ ವಿದ್ಯಾರ್ಥಿಗಳ ಜೊತೆಗೆ ಕಾಲೇಜಿಗೆಂದು ತೆರಳಿದ್ದರು. ಆದರೆ ಸಂಜೆ 5.00 ಗಂಟೆಯವರೆಗೂ ಈಕೆ ಮರಳಿ ಬಾರದೇ ಇದ್ದು, ಅತ್ತ ಕಾಲೇಜಿಗೂ ಹೋಗದೆ ಇತ್ತ ಹಾಸ್ಟೆಲ್ ಗಾಗಲೀ, ಹೆತ್ತವರ ಮನೆಗೂ ಹೋಗದೆ ನಾಪತ್ತೆಯಾಗಿರುವುದಾಗಿ ಹಾಸ್ಟೆಲ್ ವಾರ್ಡನ್ ಶುಭಾ ನಾಯಕ್ ರವರು ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ಕೈಗೆತ್ತಿಕೊಂಡ ಬೆಳ್ತಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿನಿಯನ್ನು ಆಲ್ದೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಆಕೆಯ  ವಿಚಾರಣೆ ನಡೆಸಿದ ಬಳಿಕ, ಆಕೆಯನ್ನು ಮನೆಯವರಿಗೆ ಒಪ್ಪಿಸಿದ್ದು, ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.