ಅರಸಿನಮಕ್ಕಿಯಲ್ಲಿ ಪೊಲೀಸ್ ಜನ ಸಂವಾದ ಕಾರ್ಯಕ್ರಮ

ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ ನೇತೃತ್ವದಲ್ಲಿ ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪೊಲೀಸ್–ಜನ ಸಂವಾದ, ಕಾನೂನು ಮಾಹಿತಿ ಕಾರ್ಯಕ್ರಮ ನ.27ರಂದು ಅರಸಿನಮಕ್ಕಿಯ ಹತ್ಯಡ್ಕ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿಯ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು. ಚೈತನ್ಯ ಮಿತ್ರ ಕಲಾವೃಂದ  ಅಧ್ಯಕ್ಷರಾದ ವೃಷಾಂಕ್ ಖಾಡಿಲ್ಕರ್ ಅಧ್ಯಕ್ಷತೆ ವಹಿಸಿದ್ದರು.

ಧರ್ಮಸ್ಥಳ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ರಾಘವೇಂದ್ರ ನಾಯಕ್, ಕಪಿಲ ಕೇಸರಿ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ, ಶ್ರೀ ಕ್ಷೇ. ಧ.ಗ್ರಾ. ಯೋಜನೆ ಹತ್ಯಡ್ಕ ಸೇವಾಪ್ರತಿನಿಧಿಗಳಾದ ಯಮುನಾ ಎಂ., ರೂಪಾ, ಅರಸಿನಮಕ್ಕಿ ಪ.ಪೂ.ಕಾಲೇಜಿನ ಪ್ರಾಂಶುಪಾಲೆ ದಾಕ್ಷಾಯಿಣಿ ಮೊದಲಾದವರು ಉಪಸ್ಥಿತರಿದ್ದರು.

ಗಣೇಶ್ ಹೊಸ್ತೋಟ ಸ್ವಾಗತಿಸಿ, ಸುಮಂತ್ ಅಳಕೆ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.