ಬೆಳ್ತಂಗಡಿ: ಬಂಟರ ಸಂಘದಿಂದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ವತಿಯಿಂದ ತಾಲೂಕಿನ ಬಂಟ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ನ.28 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ  ಜರುಗಿತು.

ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಾನಿಗಳ ಮೂಲಕ ಇಂತಹ ದೊಡ್ಡ ಕೆಲಸವನ್ನು ಬೆಳ್ತಂಗಡಿ ಬಂಟರ ಸಂಘ ಮಾಡುತ್ತಿದೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ. ಅದೇ ರೀತಿ ವಿಧ್ಯಾರ್ಥಿಗಳು ಕೂಡ ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆದು ಹೆತ್ತವರ ಹಾಗೂ ಸಮಾಜದ ಗೌರವವನ್ನು ಹೆಚ್ಚಿಸಬೇಕು ಎಂದರು.

ಮುಖ್ಯ ಅತಿಥಿ, ಉದ್ಯಮಿ ಹರಿಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಯಾವತ್ತೂ ಆಶಾವಾದಿಗಳಾಗಿರಬೇಕು. ಕಷ್ಟಪಟ್ಟು ಪ್ರಯತ್ನಪಟ್ಟರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು. ತಾಲೂಕು ಬಂಟರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ, ಬಂಟರ ಸಂಘದ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ನವಶಕ್ತಿ , ಮಹಿಳಾ ವಿಭಾಗದ ಅಧ್ಯಕ್ಷೆ ಸಾರಿಕ ಡಿ. ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಕಿರಣ್ ಶೆಟ್ಟಿ ಮೊದಲಾದವರು  ಉಪಸ್ಥಿತರಿದ್ದರು.

ಸಂಘದ ಕೋಶಾಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ ಪ್ರಸ್ತಾವಿಸಿದರು.  ಕಾರ್ಯದರ್ಶಿ ರಾಜು ಶೆಟ್ಟಿ ವಿದ್ಯಾರ್ಥಿಗಳ ವಿವರಗಳ ಮಾಹಿತಿ ನೀಡಿದರು.

ವಿದ್ಯಾರ್ಥಿ ನಿಧಿ ಸಂಚಾಲಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಸ್ವಾಗತಿಸಿ, ರವೀಂದ್ರ ಶೆಟ್ಟಿ ಬಳೆಂಜ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.