ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಕ್ಷದೀಪೋತ್ಸವ ಪಾದಯಾತ್ರೆಗೆ ಚಾಲನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದ್ವಾರದಿಂದ ಧರ್ಮಸ್ಥಳದವರೆಗೆ 9ನೇ ವರ್ಷದ ಪಾದಯಾತ್ರೆ ಇಂದು(ನ.29)  ನಡೆಯಿತು. ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯರವರು ದೀಪ ಪ್ರಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಹರಿಶ್ ಕುಮಾರ್, ಕೆ.ಪ್ರತಾಪಸಿಂಹ ನಾಯಕ್,  ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಸಿಯೋನ್ ಆಶ್ರಮ ಟ್ರಸ್ಟ್ ನ ಯು.ಸಿ ಪೌಲೋಸ್ ಗಂಡಿಬಾಗಿಲು, ನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಮಸ್ವಾಮಿ,  ತಾಲೂಕು ಅಧ್ಯಕ್ಷೆ ಶಾರದಾ ಆರ್.ರೈ,   ವಸಂತ ಸಾಲ್ಯಾನ್,ಉದ್ಯಮಿ ಮೋಹನ ಶೆಟ್ಟಿಗಾರ್, ಜೀವವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಜೆ ಶೆಟ್ಟಿ, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ಸಂಧ್ಯಾ ಟ್ರೆಡರ್‍ಸ್‌ನ ರಾಜೇಶ್ ಪೈ,

ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಉಪನ್ಯಾಸಕ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ ರಾವ್, ಅಡೂರು ವೆಂಕಟ್ರಾವ್, ಜಯಂತ್ ಶೆಟ್ಟಿ, ಲೋಕೇಶ್ವರಿ ವಿನಯಚಂದ್ರ, ತಿಮ್ಮಪ್ಪ ಗೌಡ ಬೆಳಾಲು, ವಸಂತ ಮಜಲು, ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ ಲಾಯಿಲ, ಶಂಕರ  ಹೇಡ್ಯ, ಯೋಗೀಶ್ ಕುಮಾರ್ ನಡಕ್ಕರ, ಜ ಯೋಜನಾ ನಿರ್ದೇಶಕ ವಸಂತ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಪಿ.ಕೆ ರಾಜು ಪೂಜಾರಿ ಕಾಶಿಪಟ್ಣ, ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹೆಗ್ಡೆ, ವಲಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ,

ನಾಮದೇವ ರಾವ್ ಮುಂಡಾಜೆ, ಮಂಜುನಾಥ ಕಾಮತ್ ಕೊಲ್ಲಿ, ತಾಲೂಕು ಯೋಜನಾಧಿಕಾರಿಗಳಾದ ಜಯಕರ ಶೆಟ್ಟಿ, ಯಶವಂತ್ ಕುಮಾರ್, ತಾಲೂಕಿನ ಗಣ್ಯರು, ಧರ್ಮಸ್ಥಳದ ವರ್ತಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 15 ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹೆಗ್ಗಡೆ ಅಭಿಮಾನಿಗಳು ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಜನಾರ್ದನ ದೇವಸ್ಥಾನದ ಸಮೀಪ ಒಟ್ಟು ಸೇರಿ ಅಲ್ಲಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಹೊರಟರು. ಪಾದಯಾತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬಿಂಬಿಸುವ ವಿಶಿಷ್ಟ, ವಿಭಿನ್ನ ಮಾದರಿಯ ಟ್ಯಾಬ್ಲೋಗಳ ಪ್ರದರ್ಶನ  ಆಕರ್ಷನೀಯವಾಗಿತ್ತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.