ಕೊರಂಜ ಶಾಲಾ ಹಿರಿಯ ಶಿಕ್ಷಕಿ ವನಜ ಕುಮಾರಿ ಬಿ ಸೇವಾ ನಿವೃತ್ತಿ

ಗೇರುಕಟ್ಟೆ : ಇಲ್ಲಿಯ ಕೊರಂಜ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ವನಜ ಕುಮಾರಿ ಬಿ ಯವರು ನ.30 ರಂದು ಸೇವಾ ನಿವೃತ್ತಿಹೊಂದಿದರು.

ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ, ನಂತರ ಶಿಕ್ಷಣ ಇಲಾಖೆಯ ಶಿಕ್ಷಕ ತರಬೇತಿ ಪಡೆದು ಉತ್ತೀರ್ಣರಾದರು. ಬೆಳ್ತಂಗಡಿ ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಇವರು. ಕೊರಂಜ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 22 ವರ್ಷಗಳ ಕಾಲ ಶಿಕ್ಷಕಿಯಾಗಿ  ಸೇವೆಯನ್ನು ಸಲ್ಲಿಸಿ, ನ.30 ರಂದು ಸೇವಾ ನಿವೃತ್ತಿ ಹೊಂದಿದರು

ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕಾರಾಮ ಪೂಜಾರಿಯವರ ಧರ್ಮಪತ್ನಿಯಾದ ಇವರು, ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಸೇರಿದಂತೆ ಉನ್ನತ ಮಟ್ಟದ ಸೇವೆ ಸಲ್ಲಿಸುವ ಅನೇಕ ಶಿಷ್ಯರನ್ನು ಹೊಂದಿರುತ್ತಾರೆ.

ಇವರಿಗೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ಸಂಘದ ನಿರ್ದೇಶಕರಾದ ವಿಜಯ ಕುಮಾರ್, ಸಂಧ್ಯಾ, ಬೆಳ್ತಂಗಡಿ ಶಿಕ್ಷಣ ಇಲಾಖೆಯ ಸಿ.ಆರ್.ಪಿ.ರಾಜೇಶ್ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ,ಸಮಿತಿ ಸದಸ್ಯರು, ಮುಖ್ಯ ಶಿಕ್ಷಕಿ ಶಾಂತ ಎಸ್,ಸಹ ಶಿಕ್ಷಕರು, ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಶಾಲು ಹೊದಿಸಿ, ಫಲ-ಪುಪ್ಪ ನೀಡಿ, ಗೌರವಿಸಿ, ನಿವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.