ಲಾಯಿಲದಲ್ಲಿ  ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಪ್ರಚಾರ ಸಭೆ

ಕೋಟ ನಾಲ್ಕನೇ ಭಾರಿಗೆ ಆಯ್ಕೆಯಾಗುವುದು ಖಚಿತ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷ ಬೆಳ್ತಂಗಡಿ ಮಂಡಲ ವತಿಯಿಂದ ಲಾಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಪ್ರಚಾರ ಸಭೆಯು ಡಿ. 1 ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಶಾಸಕ ಹರೀಶ್ ಪೂಂಜ ಮಾತನಾಡಿ ಕೋಟ ಶ್ರೀನಿವಾಸ ಪೂಜಾರಿಯವರ ತುಂಬಾ ಪ್ರೀತಿಯ ತಾಲೂಕು ಬೆಳ್ತಂಗಡಿ ಇಲ್ಲಿಂದಲೇ ಚುನಾವಣ ಪ್ರಚಾರ ಆರಂಭಿಸಲಾಗಿದೆ.
ಬೆಳ್ತಂಗಡಿಯಲ್ಲಿ ಪಟ್ಟಣ ಪಂಚಾಯತ್, ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಸದಸ್ಯರು ಸೇರಿ ಒಟ್ಟು ತಾಲೂಕಿನಲ್ಲಿ 522 ಸದಸ್ಯರುಗಳ ಮತಗಳು ಇದೆ. ಕೋಟ ಶ್ರೀನಿವಾಸ ಪೂಜಾರಿ 4ನೇ ಬಾರಿಗೆ ಬಹುಮತ ಆಯ್ಕೆಯಾಗುವುದು ಖಚಿತ. ಇವರ ಮೇಲೆ ಸರಕಾರಕ್ಕೆ ವಿಶ್ವಾಸವಿದೆ ಆದರಿಂದ ಬಂದರು ಮೀನುಗಾರಿಕೆ, ಸಮಾಜ ಕಲ್ಯಾಣ, ಮುಜರಾಯಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಬೆಳ್ತಂಗಡಿ ಎಲ್ಲಾ ಸಮುದಾಯದ ಭವನಕ್ಕೆ ರೂ. 5.50ಕೋಟಿ ನೀಡಿದ್ದಾರೆ ಎಂದರು.
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಎಲ್ಲಾ ಗ್ರಾಮ ಪಂಚಾಯತಗಳ ಮತ್ತು ಪಟ್ಟಣ ಪಂಚಾಯತ್‌ಗಳ ಸದಸ್ಯರುಗಳ ಮತಯಾಚಿಸಿದರು. ಹೆಚ್ಚಿನ ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು. 2008ರಲ್ಲಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಗ್ರಾಮ ಪಂಚಾಯತ್ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದರು. ಇದೀಗ ಗ್ರಾಮ ಪಂಚಾಯತ್ ಭಷ್ಟಚಾರ ಮುಕ್ತವಾಗಿದೆ. ನಾನು ಗ್ರಾಮ ಪಂಚಾಯತ್ ಸದಸ್ಯನಾಗಿ ಇದ್ದಾಗ ರೂ. 20 ಭತ್ಯೆ ಇತ್ತು. ಇದೀಗ ಹೆಚ್ಚಾಗಿದ್ದು, ಮುಂದಕ್ಕೆ ರೂ. 2000ರಂತೆ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಅಂಗಾರ, ಮಂಡಲ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮಂಡಲ ಜಿಲ್ಲಾಧ್ಯಕ್ಷ ಸುದರ್ಶನ್, ಪ್ರಭಾರಿ ರಾಜೇಶ್ ಕಾವೇರಿ, ಮಂಡಲ ಉಸ್ತುವಾರಿ ಸುಧೀರ್ ಶೆಟ್ಟಿ ಕಣ್ಣೂರು, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಹಾಗೂ ಲಾಲ, ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ಪಟ್ಟಣ ಪಂಚಾಯತ್‌ನ ಎಲ್ಲಾ ಸದಸ್ಯರು ಮತ್ತು ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶೀ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು..

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.