ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿಯ ವಿಧಾನ ಪರಿಷತ್ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಕ್ಷೇತ್ರದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ, ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೊಳಿಯಾರು, ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲೆಯ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.