ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಸರ್ವಧರ್ಮ ಸಮ್ಮೇಳನ: 89ನೇ ಅಧಿವೇಶನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಕಾರ್ಯಕ್ರಮಗಳು ಪ್ರಾರಂಭಗೊಂಡಿದ್ದು, ಇದರ ಅಂಗವಾಗಿ ಸರ್ವಧರ್ಮ ಸಮ್ಮೇಳನ: 89 ನೇ ಅಧಿವೇಶನ ಇಂದು(ಡಿ.2)  ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.

ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರು ಸರ್ವಧರ್ಮ ಸಮ್ಮೇಳನವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬೆಂಗಳೂರು ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ಪ್ರೊ. ರಾಮಚಂದ್ರ ಜಿ. ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ, ಮಾನಸ ಗಂಗೋತ್ರಿ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ  ಡಾ. ಎಂ.ಎಸ್ ಪದ್ಮ, ಸಾಗರ ತಾಲೂಕಿನ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಸರ್ಫ್ರಾಜ್ ಚಂದ್ರಗುತ್ತಿ, ಶಿವಮೊಗ್ಗ ಕ್ರೈಸ್ತ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂದನೀಯ ಫಾದರ್ ವೀರೇಶ್ ವಿ. ಮೋರಾಸ್, ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಡಾ. ಕುಮಾರ್ ಹೆಗ್ಡೆ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.