ಡಿ.4: ಸಾರ್ವಜನಿಕ ನುಡಿನಮನ ಸಮಿತಿ ವತಿಯಿಂದ ದಿ|ಭೋಜರಾಜ ಹೆಗ್ಗಡೆಯವರಿಗೆ ನುಡಿನಮನ

ಬೆಳ್ತಂಗಡಿ: ಇತ್ತೀಚಿಗೆ ನಿಧನರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸ್ವರ್ಗೀಯ ಪಡಂಗಡಿ ಭೋಜರಾಜ ಹೆಗ್ಗಡೆಯವರಿಗೆ ನುಡಿನಮನ ಕಾರ್ಯಕ್ರಮವು ಡಿ.4ರಂದು ಸಂಜೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ.
ಮೂಡಬಿದ್ರೆ ಜೈನ ಮಠದ ಪರಮಪೂಜ್ಯ `ಭಾರತಭೂಷಣ’ ಜಗದ್ಗುರು ಸ್ವಸ್ತಿಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಹಾಗೂ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತಿಯಿರುವರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್‌ಸಿಂಹ ನಾಯಕ್, ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.