ವಿ.ಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಿಂದ ಬೆಳ್ತಂಗಡಿಯಲ್ಲಿ ಪ್ರಚಾರ ಸಭೆ

ಬೆಳ್ತಂಗಡಿ: ಮುಂದಿನವಾರ ನಡೆಯಲಿರುವ ವಿಧಾನ ಪರಿಚತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಂಜುನಾಥ ಭಂಡಾರಿ ಯವರಿಂದ ಚುನಾವಣಾ ಪ್ರಚಾರದ ಅಂಗವಾಗಿ ಮಹತ್ವದ ಸಭೆಯು ಡಿ.2 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘದ ಆಶಾ ಸಾಲಿಯಾನ್ ಸಭಾಂಗಣದಲ್ಲಿ ಜರುಗಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ ಮತ್ತು ರಂಜನ್ ಜಿ. ಗೌಡ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದರು.

ಸಭೆಯಲ್ಲಿ ಮಾಜಿ ಸಚಿವ ಕೆ ಗಂಗಾಧರ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಎಮ್‌.ಎಲ್‌.ಸಿ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ‌.ಎಸ್. ಮುಹಮ್ಮದ್, ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ, ‌ವೀಕ್ಷಕರಾದ ಕೃಷ್ಣಮೂರ್ತಿ, ಜಯರಾಜ್, ಜಿಲ್ಲಾ ಅಲ್ಪ ಅಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಎ.ಪಿ.ಎಂ.ಸಿ. ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ಡಕ್ಕ, ಜಿ.ಪಂ. ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಅಬ್ದುಲ್ ರಹಿಮಾನ್ ಪಡ್ಪು, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತಿತರ ನಾಯಕರು ಭಾಗಿಯಾಗಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.