ಅಳದಂಗಡಿ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು

ಅಳದಂಗಡಿ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನದಲ್ಲಿ ಭಾಗವಹಿಸಿ ನಿರ್ಗಮಿಸುತ್ತಿರುವ ವೇಳೆ ತುಳುನಾಡಿನ ಪ್ರಸಿದ್ಧ ದೈವಸ್ಥಾನಗಳಲ್ಲಿ ಒಂದಾದ ಅಳದಂಗಡಿ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ಕ್ಷೇತ್ರದ ದೈವದ ನರ್ತನ ಸೇವೆಯನ್ನು ವೀಕ್ಷಿಸಿದರು.

ಜೊತೆಗೆ ಶ್ರೀ ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಅನ್ನದಾನ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಆರೋಗ್ಯ ಶಿಬಿರ, ಕೊರೊನಾ ವಾರಿಯರ್ಸ್ ಗಳಿಗೆ ಪ್ರೋತ್ಸಾಹಧನ ಮೊದಲಾದ  ಅನೇಕ ಸಮಾಜ ಸೇವಾ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಅಳದಂಗಡಿ ಅಜಿಲಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರವರು ರಾಜ್ಯಪಾಲರಿಗೆ ಶ್ರೀ ದೈವದ  ಬೂಳ್ಯ ಪ್ರಸಾದವನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.