ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಲ್ಲಿ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ

ಉಜಿರೆ: ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮಲೆಬೆಟ್ಟು ಇಲ್ಲಿಯ ಉದ್ಭವ ಶ್ರೀ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಲ್ಲಿ ಷಷ್ಠಿ ಪ್ರಯುಕ್ತ  ಡಿ.9 ರಂದು  ವಿಶೇಷ ಪೂಜೆ ಕಾರ್ಯಕ್ರಮಗಳು ನಡೆಯಲಿದೆ.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು.ವಿಜಯರಾಘವ ಪಡ್ವೆಟ್ನಾಯರವರ ಮಾರ್ಗದರ್ಶನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಊರ-ಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಅಭಿವೃದ್ಧಿ ಸಮಿತಿ, ಆಡಳಿತ ಸಮಿತಿ, ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು ವಿನಂತಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.