ಬೆಳಾಲು ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮಸಭೆ ಡಿ.1 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಉಜಿರೆ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕಾರ್ತಿಕ್ ಸಭೆಯನ್ನು ಮುನ್ನಡೆಸಿಕೊಟ್ಟರು. ಉದ್ಯೋಗ ಖಾತರಿ ಯೋಜನೆಯ ಕುರಿತು ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ತಾಲೂಕು ಐಇಸಿ ಸಂಯೋಜಕರು ಮಾಹಿತಿ ನೀಡಿದರು.

ತಾಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕ ರಾಜೀವ್ ಸಾಲಿಯಾನ್ ಫಲಾನುಭವಿಗಳ ಉದ್ಯೋಗ ಖಾತರಿ ಯೋಜನೆಯ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿ, ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕೃಷಿ ಇಲಾಖೆಯ ಸಹಾಯಕ ಅಧಿಕಾರಿ ಚಿದಾನಂದ ಹೂಗಾರ್, ಗ್ರಾ.ಪಂ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.