ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ವಕೀಲರ ದಿನಾಚರಣೆಯನ್ನು ಬೆಳ್ತಂಗಡಿಯ ನ್ಯಾಯಾಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್. ಸಿ ನ್ಯಾಯಾಧೀಶ ನಾಗೇಶ ಮೂರ್ತಿ ಬಿ.ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಸಂಘದ ಅದ್ಯಕ್ಷ ಪ್ರಸಾದ್ ಕೆ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರ ಸಮಿತಿ ಚೇರ್ಮನ್ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಅಪರ ಸರಕಾರಿ ನ್ಯಾಯವಾದಿ ಆಶಿತಾ, ವಕೀಲರ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಾದ ಸ್ವರ್ಣಲತಾ ಎ ಮತ್ತು ಪಿ. ಸುಬ್ರಹ್ಮಣ್ಯ ಕುಮಾರ್ ಇವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ಸಂಘದ ನೂತನ ಸದಸ್ಯರಾಗಿ ಸದಸ್ಯತ್ವ ಪಡೆದ ಯುವ ವಕೀಲರುಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಗೌಡ ಸ್ವಾಗತಿಸಿ, ಕೋಶಾಧಿಕಾರಿ ಹರಿಪ್ರಕಾಶ್ ಪಿ.ಎನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಠೋಸರ್ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಪ್ರಿಯಾಂಕ, ಮಾಜಿ ಅಧ್ಯಕ್ಷರಾದ ಸೇವಿಯರ್ ಪಾಲೇಲಿ, ಮುಮ್ತಾಜ್ ಬೇಗಂ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.