ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಉಭಯ ಘಟಕಗಳಿಗೆ ಅಧ್ಯಕ್ಷರುಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ (ಗ್ರಾಮೀಣ) ಘಟಕದ  ನೂತನ  ಅಧ್ಯಕ್ಷರಾಗಿ  ಜಿ.ಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ ಹಾಗೂ ಬ್ಲಾಕ್ ಕಾಂಗ್ರೆಸ್ ಮಹಿಳಾ (ನಗರ) ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಂದನ ರವರು ನೇಮಕಗೊಂಡಿದ್ದಾರೆ.

ಡಿ.3 ರಂದು ಮಂಗಳೂರಿನ ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ನಡೆದ  ದ. ಕ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಸಭೆಯಲ್ಲಿ ದ. ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ  ಕೆ ಹರೀಶ್ ಕುಮಾರ್ ರವರು ಉಭಯ ಘಟಕಗಳ ನೂತನ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ  ಮಂಜುನಾಥ್ ಭಂಡಾರಿ, ದ. ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಶಾಲೇಟ್ ಪಿಂಟೋ, ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಉಷಾ ಶರತ್, ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಹಾಗೂ  ಕಾಂಗ್ರೆಸ್ ನಾಯಕರುಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.