ಶ್ರೀ ಗುರುದೇವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘ ಉದ್ಘಾಟನೆ

ಬೆಳ್ತಂಗಡಿ:‘ದೇಶದಲ್ಲಿ ಅನೇಕ ಚುನಾವಣೆಗಳು ನಡೆಯುತ್ತಿವೆ. ಪ್ರತಿ ಚುನಾವಣೆಯ ಮಹತ್ವ ಮತ್ತು ಮತದಾನದ ರೀತಿಯನ್ನು ಭಾರತೀಯ ಪ್ರಜೆಗಳಾದ ನಾವೆಲ್ಲರೂ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ನ ಅಧ್ಯಕ್ಷ, ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘ ಉದ್ಘಾಟಿಸಿ ಮಾತನಾಡಿದರು. ‘ಹಲವು ಜನಪ್ರತಿನಿಧಿಗಳಿಗೆ ಮತವನ್ನು ಹೇಗೆ ಚಲಾಯಿಸಬೇಕು ಎಂಬ ಪರಿಜ್ಞಾನವಿರುವುದಿಲ್ಲ. ಹಾಗಾಗಿ ಪ್ರತಿ ಚುನಾವಣೆಯಲ್ಲಿ ಮತ ಚಲಾವಣೆಯ ತಿಳುವಳಿಕೆಯನ್ನು ಪ್ರತಿಯೊಬ್ಬರೂ ಹೊಂದಿಕೊಳ್ಳಬೇಕು. ವಿದ್ಯಾರ್ಥಿಗಳು ಈ ಸಂಘದ ಪ್ರಯೋಜನ ಪಡೆದುಕೊಂಡು ಮತ ಚಲಾಯಿಸುವ ಅಧಿಕಾರ ಬಂದಾಗ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು’ ಎಂದರು.

ಕಾಲೇಜಿನ ಸಾಂಸ್ಕೃತಿಕ ವಿಭಾಗದ ನಿರ್ದೇಶಕ, ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಮೂಡುಕೋಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ಭಾಷಣ, ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ, ಸಂಘ ನಿರ್ದೇಶಕಿ ಅಶ್ವಿನಿ ಪ್ರಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ, ಕಾಲೇಜಿನ ಸಾಂಸ್ಕೃತಿಕ ವಿಭಾಗದ ನಿರ್ದೇಶಕಿ ಹೇಮಾವತಿ ಬಹುಮಾನಿತರ ಪಟ್ಟಿ ವಾಚಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಡಾ. ಸವಿತಾ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.