ವಿ.ಪ.ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಯವರಿಗೆ ಭರ್ಜರಿ ಗೆಲುವು

ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಎರಡು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ ಭಂಡಾರಿಯವರು ಪ್ರಥಮ ಪ್ರಾಶಸ್ತ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ

ಇಂದು(ಡಿ.14)ಮಂಗಳೂರಿನ ಪಾಂಡೇಶ್ವರದ ರೊಸಾರಿಯೋ ಪದವಿ ಪೂರ್ವ ಕಾಲೇಜಿನಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ನಡೆದು, ಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದೆ.

ದ.ಕ ಕ್ಷೇತ್ರಕ್ಕೆ ಸಂಬಂಧಿಸಿ ಒಟ್ಟು 6040 ಮಂದಿ ಮತದಾರರ ಪೈಕಿ 6013 ಮಂದಿ ಮತದಾನ ಮಾಡಿದ್ದು, ಚುನಾವಣೆಯ ಅಂತಿಮ ಕಣದಲ್ಲಿದ್ದ ಮೂವರು ಅಭ್ಯರ್ಥಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಯವರು 3697 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯದಲ್ಲಿ ಜಯಭೇರಿ ಸಾಧಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಯವರು ಕೂಡ 2077 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಕೆ. ಬೆಳ್ಳಾರೆ 204ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದಾರೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.