ತೆಂಕಕಾರಂದೂರು: ಯುವತಿ ನಾಪತ್ತೆ

ತೆಂಕಕಾರಂದೂರು: ತೆಂಕಕಾರಂದೂರು ಗ್ರಾಮದ ಗುಂಡೇರಿ ನಿವಾಸಿ ರಕ್ಷಿತಾ (20.ವ) ಎಂಬವರು ನಾಪತ್ತೆಯಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಕ್ಷಿತಾ ರವರು ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಸೇಲ್ಸ್‌ಗರ್ಲ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದು, ಡಿ. 29ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಸಂಜೆ ಸುಮಾರು ಹೊತ್ತಿನವರೆಗೂ ಮನೆಗೆ ಮರಳಿ ಬಾರದೆ ಇರುವುದನ್ನು ಕಂಡು ಮನೆಯವರು ಆಕೆ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲಕರಲ್ಲಿ  ವಿಚಾರಿಸಿದ ವೇಳೆ  ಆಕೆ ಕೆಲಸಕ್ಕೆ ಬಂದಿಲ್ಲವೆಂದು ಅಂಗಡಿ ಮಾಲಕರು ತಿಳಿಸಿದ್ದರು.

ಈ ಸಂಬಂಧ ಯುವತಿಯ ತಾಯಿ ನಾಪತ್ತೆಯಾಗಿರುವ ಮಗಳನ್ನು ಪತ್ತೆಹಚ್ಚುವಂತೆ ವೇಣೂರು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುವ ಈ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.