ಪಾಂಗಾಳ ಶ್ರೀ ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ಪ್ರಥಮ ವಾರ್ಷಿಕ ಪ್ರತಿಷ್ಠಾ ದಿನಾಚರಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಪಾಂಗಾಳ ಶ್ರೀ ಚಾಮುಂಡೇಶ್ವರಿ ಪರಿವಾರ ದೈವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ಪ್ರಥಮ ವಾರ್ಷಿಕ ಪ್ರತಿಷ್ಠಾ ದಿನಾಚರಣೆಯು ವೇ|ಮೂ| ರವಿಕುಮಾರ್ ಭಟ್ ಪಜಿರಡ್ಕ ತಂತ್ರಿವರ್ಯರ ನೇತೃತ್ವದಲ್ಲಿ  ಡಿ.31 ರಂದು ವಿಜ್ರಂಭಣೆಯಿಂದ ಜರುಗಿತು.

ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಗಣಹೋಮ, ನಾಗದೇವರಿಗೆ ತಂಬಿಲ ಸೇವೆ, ಚಾಮುಂಡೇಶ್ವರಿಗೆ ಕಲಶಾಭಿಷೇಕ, ದೈವಗಳ ಸನ್ನಿಧಿಯಲ್ಲಿ ತಂಬಿಲ ಸೇವೆ,  ಉಪದೇವತಾ ಸ್ಥಾನಗಳಿಗೆ ನವಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ತೋರಣ ಮುಹೂರ್ತ ನಡೆದು ಬಳಿಕ ಶ್ರೀ ಚಾಮುಂಡೇಶ್ವರಿ ದೇವಿಗೆ ಪ್ರಸನ್ನ ಪೂಜೆ, ಭಂಡಾರ ಇಳಿದು ಶ್ರೀ ಚಾಮುಂಡೇಶ್ವರಿ ಪರಿವಾರ ದೈವಗಳ ನೇಮೋತ್ಸವ ಜರುಗಿ, ಅನ್ನಸಂತರ್ಪಣೆ  ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ನಾಗರಿಕಾ ಸೇವಾಟ್ರಸ್ಟ್ ನ ಸೋಮನಾಥ ನಾಯಕ್, ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮೊದಲಾದ ಗಣ್ಯರು, ಊರ-ಪರವೂರ ಭಕ್ತಾಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದಂತಹ ಅತಿಥಿ ಗಣ್ಯರನ್ನು ಕ್ಷೇತ್ರದ ಧರ್ಮದರ್ಶಿ ಬಾಬು ಗೌಡ, ವಿಠಲ ಗೌಡ, ಪುರಂದರ ಗೌಡ ಮತ್ತು ಕುಟುಂಬಸ್ಥರು ಸ್ವಾಗತಿಸಿ, ಸತ್ಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.