ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಧನಕೀರ್ತಿ ಆರಿಗ, ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರೇಶ್ ಇಳಂತಿಲ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.1 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಅಚುಶ್ರೀ ಬಾಂಗೇರು ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ 2022-23 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಧನಕೀರ್ತಿ ಆರಿಗ ಧರ್ಮಸ್ಥಳ,  ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರೇಶ್ ಇಳಂತಿಲ, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಶಿರ್ಲಾಲು, ಜೊತೆ ಕಾರ್ಯದರ್ಶಿ ಅಶ್ರಫ್ ಆಲಿ ಕುಂಞಿ ಆಯ್ಕೆಯಾದರು. ಹಿರಿಯ ಸದಸ್ಯ ಆರ್.ಎನ್. ಪೂವಣಿ ರವರು ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ನಿರ್ಗಮಿತ ಕಾರ್ಯದರ್ಶಿ ಜಾರಪ್ಪ ಪೂಜಾರಿ ವರದಿ ವಾಚಿಸಿ, ಕೋಶಾಧಿಕಾರಿ ಪ್ರಸಾದ್ ಶೆಟ್ಟಿ ಲೆಕ್ಕಪತ್ರ ವಾಚಿಸಿದರು. ಉಪಾಧ್ಯಕ್ಷ ಪದ್ಮನಾಭ ವೇಣೂರು, ಜೊತೆ ಕಾರ್ಯದರ್ಶಿ ಸಂಜೀವ ಎನ್.ಸಿ, ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.