ಶಿಬಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಆಯ್ಕೆ

ಶಿಬಾಜೆ: ಶಿಬಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ನೂತನ ನಿರ್ದೇಶಕರುಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಜರುಗಿ, ಸಂಘದ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಪೈಕಿ ಕುಂಞ ಎಂಬವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ಸ್ಥಾನಗಳಿಗೆ ಪ್ರಮೋದ್ ಟಿ.ಎಂ ಸೇರಿದಂತೆ ಇವರ ನೇತೃತ್ವದಲ್ಲಿ ಸ್ಪರ್ಧಿಸಿದ್ದ  ಕೆ.ಪಿ ಜೋರ್ಜ್, ಪಿ.ಎಂ ಬಾಬು, ಒ.ಐ ಮ್ಯಾಥ್ಯೂ, ಟಿ.ಎ.ವರ್ಗಿಸ್, ಶಾಂತಾ, ಪಿ.ವಿ.ಶಿಬಿ, ಜಗದೀಶ್ ಬಿ, ಒ.ಐ ಜೋಯಿ, ಮರಿಯಮ್ಮ, ರೀತಮ್ಮ ಇವರುಗಳು ಜಯಭೇರಿಗಳಿಸುವ ಮೂಲಕ ಸಂಘದ ನೂತನ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ.

ಜ.೩ರಂದು ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಶಿಬಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಜಗದೀಶ ಬಿ ಅವರು ಆಯ್ಕೆಯಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.