ಕೊಯ್ಯೂರು ಯಾಕೂಬ್ ಇವರಿಗೆ ರೋಟರಿ ಬೆಂಗಳೂರು ಇವರಿಂದ ‘ವೊಕೇಶನಲ್ ಎಕ್ಸಲೆನ್ಸ್ ಅವಾರ್ಡ್’


ರಾಷ್ಟ್ರಪ್ರಶಸ್ತಿ ಪುರಷ್ಕೃತ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀ ಯಾಕೂಬ್ ಕೊಯ್ಯೂರು ಇವರನ್ನು ರೋಟರಿ ಇಂಟರ್ ನ್ಯಾಶನಲ್ ಇಂದಿರಾನಗರ್ ಬೆಂಗಳೂರು ಇವರು 2022 ರ ವೊಕೇಶನಲ್ ಎಕ್ಸಲೆನ್ಸ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ ಈ ಬಾರಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರೊಬ್ಬರು ಆಯ್ಕೆಗೊಂಡಿರುವುದು ವಿಶೇಷವಾಗಿದೆ.

ರಾಜ್ಯದಲ್ಲೇ ಸರಕಾರಿ ಶಾಲೆಯಲ್ಲಿ ಮೊತ್ತ ಮೊದಲ ಗಣಿತ ಪ್ರಯೋಗಾಲಯ ನಿರ್ಮಿಸಿ, ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ನೂತನ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿರುವ ಶ್ರೀ ಯಾಕೂಬ್ ಕೊಯ್ಯೂರು ಇವರಿಗೆ ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತಾರೆ. ಇದೇ ಜನವರಿ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೋಟರಿ ಸಂಸ್ಥೆಯ ಅಧಿಕೃತ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.