ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಲಂಚ ಭ್ರಷ್ಟಾಚಾರ ವಿರೋಧಿ ಜನಜಾಗೃತಿ ಆಂದೋಲನ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಹಾಗೂ ಸುದ್ದಿ ಜನಾಂದೋಲನ ವೇದಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ ಉತ್ತಮ ಸೇವೆಗೆ ಪುರಸ್ಕಾರ ಕಾರ್ಯಕ್ರಮವು ಜ.14ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುದ್ದಿ ಸಂಪಾದಕರು ಡಾ .ಯು.ಪಿ. ಶಿವಾನಂದ್  ಭ್ರಷ್ಟಾಚಾರ ಮಾಡುವವರನ್ನು ದರೋಡೆಕೋರರು ಎಂದು ಹೇಳುತ್ತಾರೆ. ಭ್ರಷ್ಟಾಚಾರವನ್ನು ನಾವು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟರು.

ಈ ವೇಳೆ ವಿದ್ಯಾರ್ಥಿಗಳು ಭ್ರಷ್ಟಾಚಾರ ನಿರ್ಮೂಲನೆಯ ಘೋಷಣೆಯನ್ನು ಕೂಗಿದರು . ವೇದಿಕೆಯಲ್ಲಿ ಸುದ್ದಿ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಮಂಜುನಾಥ್ ರೈ, ಸುದ್ದಿ ಚಾನೆಲ್ ಮುಖ್ಯಸ್ಥ ದಾಮೋದರ್ ದೊಂಡೋಲೆ, ಪ್ರಾಂಶುಪಾಲ ಜೋಸೆಫ್ ಎಂ .ಎನ್, ಉಪನ್ಯಾಸಕ ಪ್ರಕಾಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ನಾಮಫಲಕವನ್ನು ಹಸ್ತಾಂತರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.