ಧರ್ಮಸ್ಥಳ: ಧರ್ಮಸ್ಥಳ ಅನ್ನ ಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿರುವ ವೇಳೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಜ.14 ರಂದು ನಡೆದಿದೆ.
ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಮುದ್ದಾಡಿ ನಿವಾಸಿ ದಿನೇಶ್( 40.ವ) ಎಂಬುವರೇ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ.
ಕಟ್ಟಡ ಕಾರ್ಮಿಕರಾಗಿರುವ ಇವರು ಇಂದು ಬೆಳಿಗ್ಗೆ ಸುಮಾರು 9.30 ರ ವೇಳೆ ಧರ್ಮಸ್ಥಳದ ಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿರುವ ವೇಳೆ ಆಕಸ್ಮಿಕವಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.