ಬೆಳ್ತಂಗಡಿ: ಮೂಡುಬಿದ್ರಿಯಲ್ಲಿ ನಡೆದ ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ಎಂ.ಕೆ. ಅನಂತರಾಜು ಕಾಲೇಜ್ ಆಫ್ ಫಿಜಿಕಲ್ ಎಜುಕೇಶನ್ ಇದರ ಆಶ್ರಯದಲ್ಲಿ ಜರುಗಿದ 6ನೇ ವರ್ಷದ ಆಲ್ ಇಂಡಿಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿಯ ಶ್ರೀ ಗುರುದೇವ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ.
ಭಾಗವಹಿಸಿದ ವಿದ್ಯಾರ್ಥಿಗಳಾದ ಯುವರಾಜ್ 2 ಚಿನ್ನ ಪದಕ, ಶ್ರವಣ್ 2 ಚಿನ್ನ ಪದಕ, ರಕ್ಷಾ 1 ಚಿನ್ನ 1 ರಜತ ಪದಕ, ಇರ್ಫಾನ್ 1 ಚಿನ್ನ 1 ಕಂಚು ಪದಕ, ಶಾ ಕಮಾಲ್ 2 ಕಂಚು ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿರುತ್ತಾರೆ.
ಗುರುದೇವ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ, ಮಾಜಿ ಶಾಸಕ ಕೆ. ವಸಂತ ಬಂಗೇರ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳನ್ನು ಗೌರವಿಸಿ ಎಲ್ಲಾ ರೀತಿಯ ನೆರವು, ಸಹಕಾರ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಸುಕೇಶ್ ಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ್, ದೈಹಿಕ ಶಿಕ್ಷಣ ನಿರ್ದೇಶಕಿ ದೀಪಾ, ಕ್ರೀಡಾ ತರಬೇತುದಾರ ರಶೀದ್, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.