ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಕಂಪ್ಯೂಟರ್ ಕಲಿಕಾ ಕೇಂದ್ರವನ್ನು ಸಂಸ್ಥೆಯ ಸಂಚಾಲಕರಾದ ವಂ| ಬೇಸಿಲ್ ವಾಸ್ ಇತ್ತೀಚೆಗೆ ಉದ್ಘಾಟಿಸಿದರು.
ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಶಿಕ್ಷಣವಿಲ್ಲದ ಜ್ಞಾನ ಜ್ಞಾನವೇ ಅಲ್ಲ. ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣವನ್ನು ಪಡೆಯುವುದು ಅನಿವಾರ್ಯ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜಾ ಪ್ರಾಸ್ತಾವಿಕ ಮಾತುಗಳನ್ನಾಡಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಇನ್ಪೋಸಿಸ್ ಸಂಸ್ಥೆಯು ಕಾಲೇಜಿಗೆ 12 ಕಂಪ್ಯೂಟರ್ ಗಳನ್ನು ನೀಡಿದ್ದು ಕಾಲೇಜಿನ ಪರವಾಗಿ ಇನ್ಪೋಸಿಸ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್, ಪ್ರೌಢ ಶಾಲಾ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ವಿಶ್ವನಾಥ ಪೂಜಾರಿ, ಕುಮಾರ್ ನಾಯಿಕ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮ್ಯಾಕ್ಸಿಂ ಆಲ್ಬುಕರ್ಕ್ ಉಪಸ್ಥಿತರಿದ್ದರು.
ಪ್ರೌಢ ಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸ್ವಾಗತಿಸಿದರು, ಶಿಕ್ಷಕಿ ಶಾಂತಿ ಮೇರಿ ಡಿಸೋಜಾ ವಂದಿಸಿದರು, ಉಪನ್ಯಾಸಕ ಲಿಯೋ ನರೋನ್ಹಾ ಕಾರ್ಯಕ್ರಮ ನಿರೂಪಿಸಿದರು.