ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ, ರಾಜ್ಯ ರೈತ ಸಂಘದಿಂದ ಖಂಡನೆ

ಬೆಳ್ತಂಗಡಿ: ಗಣರಾಜ್ಯೋತ್ಸವ ದ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ರಾಜ್ಯ ರೈತರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು. ಸರ್ವರಲ್ಲಿ ಸಮಾನತೆಯನ್ನು ಕಂಡವರು. ಇಂತಹ ಗುರುವನ್ನು ಅವಮಾನಿಸುವುದು ಸರಿಯಲ್ಲ. ಸರ್ಕಾರವು ಕೂಡಲೇ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ಮಾಡಿಕೊಡುವ ಮೂಲಕ ಅವರಿಗೆ ಗೌರವ ಸಲ್ಲಿಸ ಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.