ಬೆಳ್ತಂಗಡಿ: ಮದ್ದಡ್ಕದ ಕಿನ್ನಿಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜ.17 ರಂದು ನಡೆದಿದೆ.
ನಾವೂರು ಗ್ರಾಮ ನಿವಾಸಿ ಹಮೀದ್ ಕುದುರು ರವರ ಪುತ್ರ ನಿಷ್ಬಾ(19), ಮತ್ತೊರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಅಶ್ರಫ್ ರವರ ಪುತ್ರ ಅಶ್ಪಾನ್(19) ಎಂಬವರೇ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ.
ಈ ಇಬ್ಬರು ಯುವಕರು ಮದ್ದಡ್ಕ ಮಸೀದಿ ಮುಂಭಾಗವಿರುವ ಮಟನ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಜ.17 ರಂದು ರಾತ್ರಿ ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದ ವೇಳೆ ಗುರುವಾಯನಕೆರೆಯಿಂದ ಮದ್ದಡ್ಕ ಕಡೆಗೆ ಸಂಚರಿಸುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕಿನಲ್ಲಿದ್ದದ್ದ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.