ಆಲಡೆ ಕ್ಷೇತ್ರ ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಯನ, ಸಿರಿಗಳ ಜಾತ್ರೆ ಆರಂಭ

ಬೆಳ್ತಂಗಡಿ: ಆಲಡೆ ಕ್ಷೇತ್ರವಾಗಿರುವ ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಜ. 17 ರಂದು ಆರಂಭಗೊಂಡಿದ್ದು, ಜ.21ರವರೆಗೆ ಸಂಪ್ರದಾಯಬದ್ಧವಾಗಿ ನಡೆಯಲಿದೆ.

ಜ.18ರಂದು ತೋರಣ ಮುಹೂರ್ತ, ಹೊರೆಕಾಣಿಕೆ ಸಮರ್ಪಣೆ, ಧ್ವಜರೋಹಣ, ಅನ್ನಸಂತರ್ಪಣೆ, ರಾತ್ರಿ ದೊಡ್ಡ ರಂಗಪೂಜೆ, ಬಲಿ ಉತ್ಸವ, ವ್ಯಾಘ್ರಚಾಮುಂಡಿ ಸಹಿತ ರಕ್ತೇಶ್ವರಿ ಮೈಸಂದಾಯ ದೈವಗಳಿಗೆ ಗಗ್ಗರನೇವೆ ನಡೆಯಲಿದೆ.

ಜ.19ರಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಬಲಿ ಉತ್ಸವ, ಶ್ರೀಭೂತಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ನೇಮೋತ್ಸವ ನಡೆಯಲಿದೆ.

ಜ.20ರಂದು ತುಲಾಭಾರ ಸೇವೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಯಾತ್ರಾಹೋಮ, ಬಲಿ ಉತ್ಸವ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ. ಪ್ರತಿದಿನ ವಿವಿಧ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಈ ದೇವಸ್ಥಾನವು ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿದೆ. ಅಜೀರ್ಣಾವಸ್ಥೆಯಲ್ಲಿ ಈ ದೇವಾಲಯವನ್ನು 10 ವರ್ಷಗಳ ಹಿಂದೆ ಊರ– ಪರವೂರ ಭಕ್ತರ ಸಹಕಾರದಿಂದ ಸುಮಾರು  1.50 ಕೋಟಿ ವೆಚ್ಚದಲ್ಲಿ ಸಂಪೂರ್ಣವಾಗಿ ಶಿಲಾಮಯವಾಗಿ ನವೀಕರಿಸಲಾಗಿದೆ.

ಕ್ಷೇತ್ರದಲ್ಲಿ ಬ್ರಹ್ಮಲಿಂಗೇಶ್ವರ ಉಪದೇವರಾಗಿ ಸಾನ್ನಿಧ್ಯವಿದೆ. ಅಲ್ಲದೆ, ನಾಗಬ್ರಹ್ಮ, ರಕ್ತೇಶ್ವರಿ, ನಂದಿ, ಕ್ಷೇತ್ರಪಾಲರನ್ನು ಒಳಗೊಂಡ ಪಂಚಸಾನ್ನಿಧ್ಯವು ಇಲ್ಲಿದೆ. ಜತೆಗೆ ಸಿರಿಕುಮಾರ, ಅಬ್ಬಗ ದಾರಗ, ನಂದಿಗೋಣ ಮುಂತಾದ ಶಕ್ತಿಗಳು ಇಲ್ಲಿ ನೆಲೆಯಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.