ಮಡಂತ್ಯಾರು: ಹದಿಹರೆಯ ಅಪಾಯಕಾರಿ ವಯಸ್ಸು. ಸತ್ಯ ಮಿಥ್ಯತೆಗಳನ್ನು ಪರಾಮರ್ಶಿಸಲು ಸಾಧ್ಯವಾಗದೆ ಈ ವಯಸ್ಸಿನಲ್ಲಿ ಯುವಜನಾಂಗ ಹಾದಿ ತಪ್ಪುತ್ತಿದ್ದಾರೆ,ಮಾದಕ ವಸ್ತುಗಳ ದಾಸರಾಗಿ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಯಾವ ಧರ್ಮಗಳು ಕೂಡ ದುಶ್ಚಟಗಳಿಗೆ ಬೆಂಬಲ ನೀಡುವುದಿಲ್ಲ. ಶಿಕ್ಷಣದಿಂದ ನೈತಿಕತೆಯ ಬೆಳೆವಣಿಗೆ ಸಾಧ್ಯ ಎಂದು ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾಂತೀಯ ನಿರ್ದೇಶಕ, ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯ್ಸ್ ಹೇಳಿದರು.
ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಹಾಗೂ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ಜಂಟಿ ಆಶ್ರಯದಲ್ಲಿ ಜ.18ರಂದು ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಂ|ಜೆರೊಮ್ ಡಿಸೋಜಾ ಪ್ರಾಸ್ತಾವಿಕ ಮಾತುಗಳ್ನಾಡಿ ಸ್ವಾಗತಿಸಿದರು. ಉಪನ್ಯಾಸಕರಾದ ಪ್ರಿಯಾ ಜ್ಯೋತಿ ಕುಟ್ಹಿನ್ಹಾ ವಂದಿಸಿದರು, ವಿನ್ಸೆಂಟ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ, 2021-22ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನನಿಸಲಾಯಿತು.