ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷರಾಗಿ ಡಿ. ಯದುಪತಿ ಗೌಡ ಆಯ್ಕೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ಬೆಳ್ತಂಗಡಿ ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅವರು ಆಯ್ಕೆಯಾಗಿದ್ದಾರೆ.
ಓರ್ವ ಉತ್ತಮ ಸಂಘಟಕರಾಗಿರುವ ಯದುಪತಿ ಗೌಡ ಅವರು ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸಾಹಿತ್ಯ, ಜಾನಪದ ಕ್ಷೇತ್ರದಲ್ಲಿ ಅಪಾರ ಅನುಭವವನ್ನು ಹೊಂದಿರುವ ಇವರು. ಮಲೆಕುಡಿಯರು, ಭೂತರಾಧನೆ ಬಣ್ಣಗಾರಿಕೆ, ತುಳು ಪಾಡ್ದಾನಗಳು, ಜನಪದ ಕುಣಿತಗಳು, ತುಳು ಜನಪದ ಕಥೆಗಳು ಇವರ ಪ್ರಕಟಿತ ಕೃತಿಗಳು, ಅಲ್ಲದೆ ಹಲವು ಸಂಶೋಧನಾ ಲೇಖನಗಳನ್ನು ಪ್ರಟಿಸಿದ್ದಾರೆ. ಇವರ ಭಾಷಣಗಳು, ಚಿಂತನಾ ಕಾರ್ಯಕ್ರಮಗಳು ಆಕಾಶವಾಣಿಯಲ್ಲಿ ಪ್ರಸಾರವಾಗಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿಯಾಗಿ ಮೂರು ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿ, ತಾಲೂಕಿನ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ದ.ಕ. ಜಿಲ್ಲಾ ಪ.ಪೂ. ಕಾಲೇಜು ಪ್ರಾಚಾರ್ಯರ ಸಂಘದ ಉಪಾಧ್ಯಕ್ಷರಾಗಿ, ಪ.ಪೂ. ಕಾಲೇಜು ಉದ್ಯೋಗಿಗಳ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.