ವೇಣೂರಿನ ಮುದ್ದಾಡಿ ಬಳಿ ಭೀಕರ ಅಪಘಾತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ವೇಣೂರು: ಇಲ್ಲಿಯ ಮುದ್ದಾಡಿ( ಕಾಮೆಟ್ಟು) ಬಳಿ 407 ಟೆಂಪೊ ಹಾಗೂ  ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಮಾ.19 ರಂದು ಬೆಳಿಗ್ಗೆ ನಡೆದಿದೆ.

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯನಾಡು ಮಿತ್ತೊಟ್ಟು ನಿವಾಸಿ,  ಮೂಡಬಿದಿರೆ ರೋಟರಿ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರದೀಪ ಭಟ್(28.ವ) ಎಂಬವರೇ ಅಪಘಾತದಲ್ಲಿ ಗಾಯಗೊಂಡವರಾಗಿದ್ದಾರೆ.

ಪ್ರದೀಪ್ ಭಟ್ ರವರು  ತಮ್ಮ ಬೈಕ್ ನಲ್ಲಿ  ನಯನಾಡು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿರುವ ಸಂದರ್ಭದಲ್ಲಿ ವೇಣೂರು ಸಮೀಪದ ಕಾಮೆಟ್ಟು ಬಳಿಯ ತಿರುವಿನಲ್ಲಿ ಎದುರಿನಿಂದ ಬಂದ  407 ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು  ಕಾಲಿಗೆ  ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಟೆಂಪೋ ಅಡಿಗೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,  ಬೈಕ್ ಸವಾರ ಹೆಲ್ಮೆಟ್ ಧರಿಸಿರುವ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ವೇಣೂರು  ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.