ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಪದ್ಮನಾಭ ಮಾಣಿಂಜ ಮರು ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಪದ್ಮನಾಭ ಮಾಣಿಂಜ ಪುನರಾಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ನೋಟರಿ ನ್ಯಾಯವಾದಿ ಭಗೀರಥ ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನೂತನ ಆಡಳಿತ ಮಂಡಳಿಗೆ ಇತ್ತೀಚೆಗೆ ಚುನಾವಣೆ ನಡೆದು, 16ಮಂದಿ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಸಂಘಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾ.24 ರಂದು ನಡೆಯಿತು. ರಿಟರ್ನಿಂಗ್ ಅಧಿಕಾರಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರುಗಳಾದ  ಮಾಜಿ ಶಾಸಕ ಕೆ ವಸಂತ ಬಂಗೇರ, ಸುಜಿತಾ ವಿ ಬಂಗೇರ, ತನುಜಾ ಶೇಖರ್, ಶೇಖರ ಬಂಗೇರ, ಜಗದೀಶ್ಚಂದ್ರ ಡಿ.ಕೆ, ಸಂಜೀವ ಪೂಜಾರಿ, ಕೆ.ಪಿ.ದಿವಾಕರ, ಚಂದ್ರಶೇಖರ, ಧರ್ಣಪ್ಪ ಪೂಜಾರಿ, ಗಂಗಾಧರ ಮಿತ್ತಮಾರು, ಡಾ. ರಾಜರಾಮ್, ಜಯವಿಕ್ರಮ್ ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಕೆ. ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದು, ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.