ಬೆಳ್ತಂಗಡಿ: ತಾಲೂಕು ಪಂಚಾಯತು, ಸಮಾಜಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತು ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ| ಬಿ.ಆರ್ ಅಂಬೇಡ್ಕರ್ ರವರ 131 ನೇ ಜನ್ಮ ದಿನಾಚರಣೆ ಮತ್ತು ಮಹಾವೀರ ಜಯಂತಿಯನ್ನು ಎ.14 ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಿದ.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪ.ಪಂ. ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಬೆಳ್ತಂಗಡಿ ತಹಶೀಲ್ದಾರರು ಜೆ. ಮಹೇಶ್, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಶಿವಕುಮಾರ್ ಸರ್ಕಲ್ ಇನ್ಸ್ಪೆಕ್ಟರ್. ಅಜಿತ್ ಕುಮಾರ್ ಜೈನ್ ಹಾಗೂ ಬೆಳ್ತಂಗಡಿ ಪಟ್ಟಣ ಪಂ. ಉಪಾಧ್ಯಕ್ಷರು, ಸದಸ್ಯರು, ಬೆಳ್ತಂಗಡಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ತಾಲೂಕಿನ ಪ.ಜಾತಿ/ಪ.ಪಂ. ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.