ಧರ್ಮಸ್ಥಳ: ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸವದ ಅಂಗವಾಗಿ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಮಾಡಿರುವ ಮಹಿಳಾ ಸಬಲೀಕರಣ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದು, ಎ.23 ರಂದು ನಡೆಯುವ ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುತ್ತಿದೆ.
ಜ್ಞಾನ ವಿಕಾಸ ಕೇಂದ್ರ ದ ಮೂಲಕ ಮಹಿಳೆಯರ ಸಂಘಟನೆ ಮತ್ತು ಸ್ವಾ ಉದ್ಯೋಗಕ್ಕೆ ಪ್ರೇರಣೆ ಹಾಗೂ ಮಾರ್ಗದರ್ಶನ ನೀಡುತ್ತ ಬಂದಿದ್ದು ಇವರ ಈ ಸೇವೆಯನ್ನು ಗುರುತಿಸಿ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.