ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಯಲ್ಲಿ ಕೋಟೆ ಚಾಮುಂಡಿ, ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಮೇ.13 ರಂದು ಜರುಗಲಿದೆ.
ಇಂದು ಕೆ.ವಿ ಪದ್ಮನಾಭ ತಂತ್ರಿ ಎಡಮನೆ, ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವವು ನಡೆಯಿತು.
ಸಂಜೆ ಕಲ್ಲಡ್ಕ ವಿಠಲ್ ನಾಯಕ್ ಇವರಿಂದ ಗೀತಾ ಸಾಹಿತ್ಯ ಸಂಭ್ರಮ, ಭಜನಾ ಕಾರ್ಯಕ್ರಮ, ರಾತ್ರಿ ಕೋಟೆ ಚಾಮುಂಡಿ, ವರ್ಣರ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ಜರುಗಲಿದೆ.