ಬಿಜೆಪಿ ಬೆಳ್ತಂಗಡಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ

ಉಜಿರೆ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವಿಶೇಷ ಸಭೆಯು ಮೇ.13 ರಂದು ಶಾರದ ಮಂಟಪ ಉಜಿರೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮಾತನಾಡಿ ಹಿಂದುಳಿದ ವರ್ಗಗಳ ಪ್ರತೀ ಸಮುದಾಯಕ್ಕೆ ಅನುದಾನ ನೀಡಿದ್ದು, ಅವರನ್ನು ಸಶಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಇನ್ನೂ ಮುಂದೆಯೂ ಹಿಂದುಳಿದ ವರ್ಗಗಳ ಮೋರ್ಚಾದ ಬಗ್ಗೆ ಮೋರ್ಚಾದವರಿಗೆ, ಸಮಾಜಕ್ಕೆ ಅನುದಾನ ನೀಡುವ ಮೂಲಕ ಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯ ಮಾಡುತ್ತೇನೆ. ಹಿಂದುಳಿದ ವರ್ಗದ ಮೋರ್ಚಾದ ಪ್ರತಿ ಸಂಘಟನೆಗಳು ಗ್ರಾಮ ಮಟ್ಟದಲ್ಲಿ ಬಲಿಷ್ಠವಾಗಬೇಕು. ಅವರಿಗೆ ಸಿಗುವ ಸವಲತ್ತುಗಳು ಕಟ್ಟಕಡೆಯ ಜನರಿಗೂ ತಲುಪಿಸುವಲ್ಲಿಯೂ ಹಿಂದುಳಿದ ವರ್ಗಗಳ ಮೋರ್ಚಾ ಪಾತ್ರವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹನಾಯಕ್, ರಾಜ್ಯ ಪ್ರದಾನ ಕಾರ್ಯದರ್ಶಿ ವಿವೇಕಾನಂದ,ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ,ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕ ಕುಮಾರ್, ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್,   ಪ್ರದಾನ ಕಾರ್ಯದರ್ಶಿ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿ  ಮೋನಪ್ಪ ದೇವಸ್ಯ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,  ಮಂಡಲ ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಭಾಕರ್ ಆಚಾರ್ಯ ,  ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ವಿ.ಪ್ರಸಾದ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಿಲಾವತಿ ಶೆಟ್ಟಿ, ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್, ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್,ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ,ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು.

ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ ಯಸ್ ವಂದೇ ಮಾತರಂ ಹಾಡಿದರು. ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪ್ರಭಾಕರ್ ಸ್ವಾಗತಿಸಿ ,ಪ್ರಧಾನ ಕಾರ್ಯದರ್ಶಿ ದಿನಕರ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಗಣೇಶ್ ಬಂಗೇರ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.