ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲ ಕೋಟೆ ದೈವ ಸನ್ನಿಧಿಯಲ್ಲಿ ಮೇ.11 ರಿಂದ 13ರವರೆಗೆ ಕೋಟೆ ಚಾಮುಂಡಿ, ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಜರುಗಿತು.
ದೈವ ಸನ್ನಿಧಿಯಲ್ಲಿ ಮೇ 13 ರಂದು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಯವರ ದಿವ್ಯ ಉಪಸ್ಥಿತಿಯಲ್ಲಿ , ಕೆ.ವಿ ಪದ್ಮನಾಭ ತಂತ್ರಿ ಎಡಮನೆ, ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ಬೆಳಿಗ್ಗೆ ಗಣಹೋಮ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ, ಮಹಾಪೂಜೆ ಪ್ರಸಾದ ವಿತರಣೆ ನಡೆದು ಊರಿನ ಹಾಗೂ ಪರವೂರಿನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ ಕಲ್ಲಡ್ಕ ವಿಠಲ ನಾಯಕ್ ಇವರಿಂದ ಗೀತಾ ಸಾಹಿತ್ಯ ಸಂಭ್ರಮ
ರಾತ್ರಿ 9 ರಿಂದ ಕೋಟೆ ಚಾಮುಂಡಿ, ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ನಡೆಯಿತು.