ಸತತ 3 ವರ್ಷಗಳಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಪೆರ್ಲ : ಸರಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ 2022 ರಲ್ಲಿ ಒಟ್ಟು 30 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ದಾಖಲಾಗಿದ್ದು ಕೊರೋನಾ ಸಂಕಷ್ಟದ ಸಮಯದಲ್ಲಿ ಕಳೆದ 3ವರ್ಷಗಳಿಂದ ಸತತವಾಗಿ ಶೇ.100 ಫಲಿತಾಂಶ ದಾಖಲಿಸಿದೆ.
ಈ ಪೈಕಿ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ , 17 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕೀರ್ತಿ ಮತ್ತು ನಿಶಾ 595.  ರಂಜಿತ್589, ಪೂರ್ವಿಕಾ 582, ಸ್ವರ್ಣಲತಾ 566 ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.